ಸೋಮವಾರಪೇಟೆ: ಶನಿವಾರಸಂತೆ: ಬಾಲಕಾರ್ಮಿಕರ ರಕ್ಷಣೆ, ಮಾಲೀಕರ ವಿರುದ್ಧ ಎಫ್ಐಆರ್ ದಾಖಲು
ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ. ವಾಣಿಜ್ಯ ಸಂಸ್ಥೆಗಳ ಮೇಲೆ ದಾಳಿ ನಡೆಸಿ ಮಕ್ಕಳನ್ನು ರಕ್ಷಿಸಿದ್ದು, ತಪ್ಪಿತಸ್ಥ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅಧಿಕಾರಿಗಳು ಈ ವೇಳೆ ವಿವಿಧ ಸಹಾಯವಾಣಿ ಸಂಖ್ಯೆಗಳ ಕುರಿತು ಜನರಿಗೆ ಜಾಗೃತಿ ಮೂಡಿಸಿದರು.