ದಾಂಡೇಲಿ: ತಾಲೂಕು ಆಡಳಿತ ಸೌಧದಲ್ಲಿ ಒನಕೆ ಓಬವ್ವ ಜಯಂತಿ ಆಚರಣೆ
ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ತಾಲೂಕಾಡಳಿತದ ಆಶ್ರಯದಡಿ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಕಾರ್ಯಕ್ರಮವನ್ನು ಮಂಗಳವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಆಯೋಜಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯ್ತು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಮಾಜಿ ನಗರ ಸಭಾ ಅಧ್ಯಕ್ಷ ಗೋವಿಂದ ಮೇಲಗೇರಿ, ಸಾಹಿತಿ ಭೀಮಾಶಂಕರ ಅಜನಾಳ ಅವರು ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸಗಳು ನಮ್ಮ ನಾಡಿನ ಹೆಣ್ಣು ಮಕ್ಕಳಿಗೆ ಸ್ಫೂರ್ತಿಯಾಗಬೇಕೆಂದರು.