ದಾವಣಗೆರೆಯ ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ದರ್ಶನವನ್ನು ಸೋಮವಾರ ಶಿವಮೊಗ್ಗದ ಸಂಸದ ಬಿ ವೈ ರಾಘವೇಂದ್ರ ಪಡೆದಿದ್ದಾರ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರು ಭಾನುವಾರ ನಿಧನರಾಗಿದ್ದರು. ದಾವಣಗೆರೆಯಲ್ಲಿ ಇಂದು ಅಂತಿಮ ದರ್ಶನಕ್ಕೆ ಏರ್ಪಡಿಸಲಾಗಿದ್ದು ಶಿವಮೊಗ್ಗದ ಸಂಸದ ಬಿ ವೈ ರಾಘವೇಂದ್ರ ಅವರು ಹಿರಿಯ ರಾಜಕಾರಣಿಯ ಅಂತಿಮ ದರ್ಶನ ಪಡೆದು ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ಸಂತಾಪ ಸೂಚಿಸಿದರು.