ಬಸವಕಲ್ಯಾಣ: ಜಾನಾಪೂರ ಕ್ರಾಸ್ ಬಳಿ ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
ಬಸವಕಲ್ಯಾಣ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಜಾನಾಪೂರ ಕ್ರಾಸ್ ಬಳಿ ಜರುಗಿದೆ. ಧನ್ನೂರ ವಾಡಿ ಗ್ರಾಮದ ನಿವಾಸಿ ಅಮೀರ್ ಕರೀಮ್ ಶಾ (29) ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ