ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಇಂದಿಗೆ 1310 ನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ರಾಜ್ಯ ಸರ್ಕಾರದ ಮಹತ್ವದ ಶಿಫಾರಸ್ಸು ಪತ್ರಗಳಿಗೆ ಗೌರವ ನೀಡಿ, ಸುಧೀರ್ಘವಾಗಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹಕೆ ಸ್ಪಂದಿಸಿ ಶೀಘ್ರದಲ್ಲಿಯೇ ರಾಯಚೂರಿಗೆ ಏಮ್ಸ್ ಆರೋಗ್ಯ ಸಂಸ್ಥೆಯನ್ನು ಮಂಜೂರು ಮಾಡಲೇಬೇಕೆಂದು ಕೇಂದ್ರ ಸರಕಾರವನ್ನು ಒತ್ತಾಯಿಸಿ ಇಂದು ನಡೆದ ಧರಣಿ ಸತ್ಯಾಗ್ರಹದಲ್ಲಿ ಕೇಂದ್ರ ಸರ್ಕಾರ ಕೂಡಲೇ ಈ ಒಂದು ಟೈಮ್ಸ್ ಘೋಷಣೆ ಮಾಡದೆ ಹೋದರೆ ಹೋರಾಟ ಮತ್ತಷ್ಟು ಗಂಭೀರ ಸ್ವರೂಪ ಪಡೆಯುತ್ತದೆ ಎಂದು ಎಚ್ಚರಿಕೆ ನೀಡಿದರು.