ಕನಕಪುರ: ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಮಾತುಗಳನ್ನಾಡಿದ ಚಿಂತಕ ಎಂ.ವಿ. ಕೃಷ್ಣ
ಕನಕಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ, ಕ್ರೀಡಾ ಮತ್ತು ಎನ್.ಎಸ್.ಎಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು. ವೈಚಾರಿಕ ಚಿಂತಕ ಎಂ.ವಿ. ಕೃಷ್ಣ ಅವರು ವಿದ್ಯಾರ್ಥಿಗಳಿಗೆ ಸಾಮಾಜಿಕ ಬದ್ಧತೆಯ ಪಾಠ ಮಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವೇಳೆ ಪುರಸ್ಕಾರ ನೀಡಲಾಯಿತು.