ದಾಂಡೇಲಿ: ನಗರದಲ್ಲಿ ಗಮನ ಸೆಳೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಭವ್ಯ ಮೆರವಣಿಗೆ
ದಾಂಡೇಲಿ : ನಗರದ ಹಳೆ ನಗರಸಭೆಯ ಮೈದಾನದಲ್ಲಿ ಮೂರು ದಿನಗಳವರೆಗೆ ಆಯೋಜಿಸಲಾಗಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಜಿಲ್ಲೆಯ ಹಿರಿಯ ಸಾಹಿತಿಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷರಾಗಿರುವ ರೋಹಿದಾಸ ನಾಯ್ಕ ಅವರನ್ನು ನಗರದ ಕೆ.ಸಿ ವೃತ್ತದಿಂದ ಸಮ್ಮೇಳನ ನಡೆಯುವ ಹಳೆ ನಗರಸಭೆಯ ಮೈದಾನದವರೆಗೆ ಭವ್ಯ ಮೆರವಣಿಗೆಯ ಮೂಲಕ ಇಂದು ಶನಿವಾರ ಬೆಳಗ್ಗೆ 9:30 ಗಂಟೆ ಸುಮಾರಿಗೆ ಬರಮಾಡಿಕೊಳ್ಳಲಾಯಿತು. ಮೆರವಣಿಗೆಗೂ ಮುನ್ನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ರೋಹಿದಾಸ್ ನಾಯ್ಕ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆಯವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಿ ಗೌರವಿಸಿದರು.