ಕೊಪ್ಪಳ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಗರದ ಜಿಲ್ಲಾ ಕ್ರೀಡಾಂಗಣದಿಂದ ಜಿಲ್ಲಾಡಳಿತ ಭವನದವರೆಗೆ ಸೈಕಲ್ ಜಾಥಾ ಯಶಸ್ವಿ
Koppal, Koppal | Sep 15, 2025 ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಿಂದ ಜಿಲ್ಲಾಡಳಿತ ಭವನದವರೆಗೆ ನಡೆದ ಸೈಕಲ್ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಚಾಲನೆ ನೀಡಿದರು ಸೆಪ್ಟೆಂಬರ್ 15 ರಂದು ಬೆಳಗ್ಗೆ 7-30 ಗಂಟೆಗೆ ಚಾಲನೆ ನೀಡಿ ಮಾತನಾಡಿ ನೈತಿಕ ಮತದಾನ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಲ್ಲರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನನ್ನ ಮತ ನನ್ನ ಹಕ್ಕು ಅರಿಯಬೇಕು ಯಾರು ಮತದಾನದಿಂದ ಹೊರಗೆ ಉಳಿಯಬಾರದು ಎಂಬ ಉದ್ದೇಶದಿಂದ ಅಂತರರಾಷ್ಟ್ರೀಯ ಮತದಾರರ ದಿನಾಚರಣೆಯ ನಿಮಿತ್ತ ಮತ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಡಿಸಿ ಹೇಳಿದರು ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ. ಉಪಸ್ಥಿತಿ