ಕಲಬುರಗಿ: ನಗರದಲ್ಲಿ ಪ್ರವಾಹ ಪೀಡಿತರಿಗೆ ಶರಣಬಸವೇಶ್ವರ ಸಂಸ್ಥಾನದ ನೆರವು: 10 ಲಕ್ಷ ರೂ. ಮೌಲ್ಯದ ಸಾಮಗ್ರಿ ರವಾನೆ
ಕಲಬುರಗಿ ಜಿಲ್ಲೆಯ ಪ್ರವಾಹ ಪೀಡಿತರಿಗೆ ಶರಣಬಸವೇಶ್ವರ ಸಂಸ್ಥಾನ ಮತ್ತು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಿಂದ 10 ಲಕ್ಷ ರೂ. ಮೌಲ್ಯದ ಪರಿಹಾರ ಸಾಮಗ್ರಿಗಳನ್ನು ರವಾನಿಸಿದೆ. ಶರಣಬಸವೇಶ್ವರ ದೇವಾಲಯ ಆವರಣದಲ್ಲಿ ಚಿರಂಜಿವಿ ದೊಡ್ಡಪ್ಪ ಅಪ್ಪಾ, ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ ಹಾಗೂ ಸಂಘದ ಪದಾಧಿಕಾರಿಗಳು ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು. ಅಫಜಲಪುರ ತಾಲ್ಲೂಕಿನ ಮಣ್ಣೂರು, ಸರಡಗಿ, ನದಿಸಿನ್ನೂರು, ಫಿರೋಜಾಬಾದ್ ಸೇರಿ ಪ್ರವಾಹದಿಂದ ಹಾನಿಗೊಳಗಾದ ಗ್ರಾಮಗಳಿಗೆ ಪರಿಹಾರ ತಲುಪಿಸಲಾಗುತ್ತಿದೆ