ಹೊಸನಗರ: ಚಂದಳ್ಳಿ ಗ್ರಾಮದಲ್ಲಿ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಸಾಲದ ಒತ್ತಡದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಹೊಸನಗರ ತಾಲೂಕಿನ ಚಂದಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದ್ದು ಭಾನುವಾರ ಬೆಳಿಗ್ಗೆ 7 ಗಂಟೆಗೆ ಈ ಸಂಬಂಧ ರಿಪ್ಪನ್ ಪೇಟೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಚಂದಳ್ಳಿ ಗ್ರಾಮದ ರಾಜು (45) ಮೃತ ವ್ಯಕ್ತಿಯಾಗಿದ್ದಾನೆ. ಕೃಷಿ ಚಟುವಟಿಕೆಗಾಗಿ ಬ್ಯಾಂಕ್ ಹಾಗೂ ಇನ್ನಿತರೆಡೆ ಸಾಲ ಮಾಡಿದ್ದು, ಬೆಳೆನಷ್ಟದಿಂದ ಸಾಲ ತೀರಿಸಲಾಗುವುದಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ