ಧಾರವಾಡ: ಸರಕಾರಿ ಆವರಣದಲ್ಲಿ ಖಾಸಗಿ ಕಾರ್ಯಕ್ರಮ ನಡೆಸದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಮಧ್ಯಂತರ ತಡೆ: ನಗರದಲ್ಲಿ ವಕೀಲ ಮಲ್ಲಿಕಾರ್ಜುನ
ಸರಕಾರದ ಆವರಣದಲ್ಲಿ ಖಾಸಗಿ ಕಾರ್ಯಕ್ರಮಗಳನ್ನು ನಡೆಸದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ಮಧ್ಯಂತರ ತಡೆ ನೀಡಿದೆ ಎಂದು ಅರ್ಜಿದಾರ ಪರ ವಕೀಲ ಮಲ್ಲಿಕಾರ್ಜುನ ತಿಳಿಸಿದರು. ಧಾರವಾಡ ನಗರದಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪುನಶ್ಚೇತನ ಸೇವಾ ಸಂಸ್ಥೆ, ವಿ.ಕೆ ಪೌಂಡೇಶನ್, ರಾಜೀವ ಮಲ್ಹಾರ ಕುಲಕರ್ಣಿ ಹಾಗೂ ಬೌದ್ಧ ಪ್ರಚಾರಕ ಉಮಾ ಚವ್ಹಾಣ ಅವರು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಅರ್ಜಿ ವಿಚಾರಣೆ ನಡೆ