ಬೆಂಗಳೂರಿನ ಆನೇಕಲ್ ಬಳಿಯ ಚಂದಾಪುರ ಫೈಓವರ್ ಮೇಲೆ ಮಂಗಳವಾರ ಎರಡು ಸ್ಟೀಪರ್ ಬಸ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ತೆರಳುತ್ತಿದ್ದ ಬಸ್ಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿಕ್ಕಿ ಹೊಡೆದಿದ್ದು, ಮುಂಬದಿ ಬಸ್ಗೆ ಹಿಂಬದಿ ಬಸ್ ಡಿಕ್ಕಿ ಹೊಡೆದಿದೆ. ಅತಿವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಈ ದುರ್ಘಟನೆಯಲ್ಲಿ ಎರಡೂ ಬಸ್ಗಳು ಜಖಂಗೊಂಡಿದ್ದು, ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.