ಬೆಂಗಳೂರು ಉತ್ತರ: ನಗರದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿ ಎದುರು ಪಕೋಡ ತಯಾರಿಸಿ ಪ್ರತಿಭಟನೆ
ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಆಲಿ ಆಸ್ಕರ್ ರಸ್ತೆಯ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿ ಎದುರು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪಕೋಡ ತಯಾರಿ ಮಾಡಿ ಪ್ಲೇಕಾರ್ಡ್ ಪ್ರದರ್ಶಿಸಿ ಆಕ್ರೋಶ ಹೊರಹಾಕಿದರು. ರಾಷ್ಟ್ರೀಯ ನಿರುದ್ಯೊಗ ದಿನಾಚರಣೆ ಹಿನ್ನೆಲೆಯಲ್ಲಿ ಆಕ್ರೋಶ ವಿಭಿನ್ನ ರೀತಿಯಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದು, ದೇಶದಲ್ಲಿ ಬಿಜೆಪಿ ಅವಧಿಯಲ್ಲಿ ನಿರುದ್ಯೋಗ ಸಮಸ್ಯೆ ತಾಂಡವ ಆಡ್ತಿದೆ ಎಂದು ಆರೋಪ ಮಾಡಿದರು. ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನಾಲಾಯಕ್ ನಿರ್ಮಲಾ ಸೀತಾರಾಮನ್ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿ ಕರೆದೊಯ್ದರು.