ಕಾರವಾರ: ನಗರದ ರಸ್ತೆಯಲ್ಲಿ ತರಕಾರಿ ಇಟ್ಟ ವ್ಯಾಪಾರಿಗಳಿಗೆ ನಗರಸಭೆ ಎಚ್ಚರಿಕೆ
ನಗರದ ಮೀನು ಮಾರುಕಟ್ಟೆ ಬಳಿಯಿದ್ದ ತರಕಾರಿ ಮಾರುಕಟ್ಟೆಯನ್ನು ನವೀಕರಿಸುವ ಉದ್ದೇಶದಿಂದ ನೆಲಸಮಗೊಳಿಸಿದ ಕಾರಣ, ವ್ಯಾಪಾರಿಗಳಿಗೆ ತಾತ್ಕಾಲಿಕವಾಗಿ ಕೋರ್ಟ್ ರಸ್ತೆಯಲ್ಲಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ, ವ್ಯಾಪಾರಿಗಳು ತರಕಾರಿ ಬುಟ್ಟಿಗಳನ್ನು ರಸ್ತೆ ಬದಿಯಲ್ಲಿಟ್ಟು ಪಾದಚಾರಿಗಳು ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರು ನೀಡಿದ ಹಿನ್ನೆಲೆಯಲ್ಲಿ, ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಬುಧವಾರ ಮಧ್ಯಾಹ್ನ 2ಕ್ಕೆ ಸ್ಥಳಕ್ಕೆ ಭೇಟಿ ನೀಡಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ವ್ಯಾಪಾರಿಗಳಿಗೆ ಮತ್ತೊಮ್ಮೆ ಎಚ್ಚರಿಕೆ ನೀಡಲಾಗಿದ್ದು, ನಿಯಮಗಳನ್ನು ಪಾಲಿಸದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.