7ನೇ ತರಗತಿ ವಿದ್ಯಾರ್ಥಿನಿಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಕಾಮುಕರು ಅಟ್ಟಹಾಸ ಮೆರೆದಿದ್ದು,ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮನೆಯಿಂದ ಹಿಟ್ಟಿನ ಗಿರಣಿಗೆ ತೆರಳುತ್ತಿದ್ದ ಬಾಲಕಿಯನ್ನು ಎಳೆದೊಯ್ದ ಇಬ್ಬರು ಕಾಮುಕರು ಕಬ್ಬಿನಗದ್ದೆಗೆ ಕರೆದೊಯ್ದು ಗ್ಯಾಂಗ್ ರೇಪ್ ನಡೆಸಿದ್ದ ಮಣಿಕಂಠ ದಿನ್ನಿಮನಿ ಹಾಗೂ ಈರಣ್ಣ ಸಂಕಮ್ಮನವರ್ ಎಂಬುವವರು ಈ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದ್ದು,ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಆರೋಪಿಗಳು ಬಾಲಕಿಯ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದು ದೂರು ನೀಡಿದ ಹಿನ್ನಲೆ ಆರೋಪಿಗಳ ತಲೆಮರೆಸಿಕೊಂಡಿದ್ದು ಬಂಧನಕ್ಕೆ ಇಂದು ಮಂಗಳವಾರ 3 ಗಂಟೆಗೆ ಪೊಲೀಸರು ಬಲೆ ಬೀಸಿದ್ದಾರೆ.