ಹುಮ್ನಾಬಾದ್: ಬೆಳೆಹಾನಿ ಹಿನ್ನೆಲೆ ಸೇಡೊಳ್ ಗ್ರಾಮಕ್ಕೆ ಶಾಸಕ ಡಾ. ಸಿದ್ದು ಪಾಟೀಲ್ ಭೇಟಿ, ಗ್ರಾಮ ಪಂಚಾಯತಿ ಕಚೇರಿಯಲ್ಲಿ ಗ್ರಾಮಸ್ಥರು, ರೈತರ ಜತೆ ಚರ್ಚೆ
Homnabad, Bidar | Oct 23, 2025 ಬೆಳೆಗಳು ಸಂಪೂರ್ಣವಾಗಿ ಹಾನಿಗೀಡಾದ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕ ಡಾ. ಸಿದ್ದು ಪಾಟೀಲ್ ಅವರು ಗುರುವಾರ ಮಧ್ಯಾಹ್ನ 2:30ಕ್ಕೆ ತಾಲೂಕಿನ ಸೇಡೋಳ್ ಗ್ರಾಮಕ್ಕೆ ಭೇಟಿ ನೀಡಿ ಹಾನಿ ಪರಿಶೀಲಿಸಿದರು. ಬಳಿಕ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ರೈತರು ಮತ್ತು ಗ್ರಾಮ ಪಂಚಾಯತ ಚುನಾಯಿತ ಪ್ರತಿನಿಧಿಗಳ ಜೊತೆ ಚರ್ಚಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಠ್ಠಲ್ ಡುಕಾರೆ ಪ್ರಮುಖರಾದ ಗೌತಮ್ ಚೌಹಾಣ್ ಮೊದಲದವರಿದ್ದರು.