ಶಿವಮೊಗ್ಗ: ಮಲವಗೊಪ್ಪ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ, ಬೈಕ್ ಸವಾರ ಸಾವು
ಚಾಲಕನ ನಿಯಂತ್ರಣ ತಪ್ಪಿ ಬೈಕ್ ವೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನಪ್ಪಿರುವ ಘಟನೆ ಶಿವಮೊಗ್ಗ ನಗರದ ಮಲವಗೊಪ್ಪ ಬಳಿ ಭಾನುವಾರ ರಾತ್ರಿ ನಡೆದಿದ್ದು ಸೋಮವಾರ ಬೆಳಿಗ್ಗೆ 8 ಗಂಟೆಗೆ ಮಾಹಿತಿ ಲಭ್ಯವಾಗಿದೆ. ಅಪಘಾತದಲ್ಲಿ ಯುವ ಮೆಡಿಕಲ್ ಪ್ರತಿನಿಧಿ ಮಹೇಶ್ ಸಾವನಪ್ಪಿದ್ದಾರೆ. ಮಹೇಶ್ ಅವರು ತಮ್ಮ ದ್ವಿಚಕ್ರ ವಾಹನ ಎಥರ್ ಎಲೆಕ್ಟ್ರಿಕ್ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನ ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ. ಮಹೇಶ್ ಅವರು ನಗರದಲ್ಲೇ ಮೆಡಿಕಲ್ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದರು.