ಅಫಜಲಪುರ ಪಟ್ಟಣದ ಲಿಂಬಿತೋಟದ ಬಳಿ ಕಬ್ಬು ತುಂಬಿದ ಟ್ರಾಕ್ಟರ್ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದು ಬಿದ್ದಿದೆ ಎಂದು ಬುದುವಾರ ಏಳು ಗಂಟೆಗೆ ಮಾಹಿತಿ ಲಭ್ಯವಾಗಿದೆ. ಸಾರ್ವಜನಿಕರು ಓಡಾಡುವ ಪ್ರದೇಶದಲ್ಲೇ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ನಡೆದಾಗ ಕಂಬದಲ್ಲಿ ವಿದ್ಯುತ್ ಪ್ರವಹಿಸುತ್ತಿತ್ತು. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಜೆಸ್ಕಾಂ ಸಿಬ್ಬಂದಿಗಳು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ ಭಾರೀ ದುರಂತ ತಪ್ಪಿಸಿದ್ದಾರೆ.