ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಕೆ ಹೊಸನಗರ ತಹಶೀಲ್ದಾರ್ ಭರತ್ ರಾಜ್ ಸೋಮವಾರ ಸಂಜೆ 5 ಗಂಟೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಔಷಧಿ ಲಭ್ಯತೆ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ನಂತರ ವೈದ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಆಸ್ಪತ್ರೆಯ ದಿನ ನಿತ್ಯದ ಕಾರ್ಯವೈಖರಿ ಹಾಗೂ ಸಿಬ್ಬಂದಿ ನಿಯೋಜನೆ ಬಗ್ಗೆ ವಿಚಾರಿಸಿದರು. ಬಳಿಕ ಒಳರೋಗಿಗಳನ್ನೂ ಭೇಟಿ ಮಾಡಿ ಅವರ ಆರೋಗ್ಯ ಸ್ಥಿತಿ ಹಾಗೂ ನೀಡಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು “ಸರ್ಕಾರಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಸೇವೆಗಳು ತೃಪ್ತಿಕರವಾಗಿವೆ