ಶಿವಮೊಗ್ಗ: ಡೆಂಘಿ ನಿಯಂತ್ರಣಕ್ಕೆ ಹಾಗೂ ಬಾಲ್ಯ ವಿವಾಹ ತಡೆಗಟ್ಟಲು ಸಾರ್ವಜನಿಕರು ಸಹಕರಿಸಿ: ನಗರದಲ್ಲಿ ತಹಶೀಲ್ದಾರ್ ಗಿರೀಶ್ ಮನವಿ
ಡೆಂಗ್ಯೂ ನಿಯಂತ್ರಣದಲ್ಲಿ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಹಾಗೂ ಬಾಲ್ಯ ವಿವಾಹ ಕೌಟುಂಬಿಕ ದೌರ್ಜನ್ಯದಂತಹ ಪ್ರಕರಣಗಳನ್ನು ತಗ್ಗಿಸಲು ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಜೊತೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ತಹಶೀಲ್ದಾರ್ ಗಿರೀಶ್ ಮನವಿ ಮಾಡಿದ್ದಾರೆ.ಮಂಗಳವಾರ ಶಿವಮೊಗ್ಗ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ವಿವಿಧ ಯೋಜನೆಗಳ ಸಮನ್ವಯ ಸಮಿತಿ ಹಾಗೂ ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧತವಿಗೆ ಸರ್ಕಾರ ಅನೇಕ ಕಾಯ್ದೆ ಕಾನೂನುಗಳನ್ನು ಜಾರಿಗೆ ತಂದಿದೆ.ಇವುಗಳನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.