ಶಿರಸಿ: ಜೂ.27 ರಂದು ಸಂಗೀತ ಪರಂಪರೆ ವಿಚಾರ ಸಂಕೀರಣ : ಎಮ್.ಎಮ್. ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಪ್ರಾಚಾರ್ಯ ಜಿ.ಟಿ.ಭಟ್
ಶಿರಸಿ: ಉತ್ತರಕನ್ನಡ ಜಿಲ್ಲೆಯ ಸಂಗೀತ ಪರಂಪರೆ ರಾಜ್ಯ ಮಟ್ಟದ ವಿಚಾರ ಸಂಕಿರಣ ಮತ್ತು ಡಾ.ಕೃಷ್ಣಮೂರ್ತಿ ಭಟ್ಟ ಬೊಮ್ಮನಹಳ್ಳಿಯವರ ಸಂಗೀತ ಕಲಾ ಕುಸುಮ ಪುಸ್ತಕ ಬಿಡುಗಡೆ ಸಮಾರಂಭ ನಗರದ ಎಂ.ಎಂ.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಮೋಟಿನ್ಸರ ಸ್ಮಾರಕ ಸಭಾಭವನದಲ್ಲಿ ಜೂ ೨೭ ರಂದು ಬೆಳಿಗ್ಗೆ ೧೦.೩೦ ರಿಂದ ನಡೆಯಲಿದೆ ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೋ.ಜಿ.ಟಿ.ಭಟ್ಟ ತಿಳಿಸಿದರು. ಅವರು ಬುಧವಾರ ನಗರದ ಎನ್.ಎಮ್.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ ೧೦ ಗಂಟೆಗೆ ಲಕ್ಷ್ಮೀ, ಸರಸ್ವತಿ ಪೂಜೆಯೊಂದಿಗೆ ಹಂಪಿ ಕನ್ನಡ ವಿಶ್ವವಿದ್ಯಾಲುದ ಕುಲಪತಿ ಡಾ.ಡಿ.ವಿ.ಪರಶಿವಮೂರ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.