ಶಿವಮೊಗ್ಗ: ಡೆಂಗ್ಯೂ ಕಾಯಿಲೆ ಭೀತಿಯ ನಡುವೆ ಶಿವಮೊಗ್ಗದಲ್ಲಿ ಝಿಕಾ ವೈರಸ್ ಆತಂಕ, ವೈರಸ್ ಗೆ ತುತ್ತಾಗಿದ್ದ ವ್ಯಕ್ತಿ ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಡೆಂಗ್ಯು ಕಾಯಿಲೆ ಭೀತಿಯ ನಡುವೆ ಝಿಕಾ ವೈರಸ್ ಆತಂಕ ಸೃಷ್ಟಿಯಾಗಿದೆ. ಝಿಕಾ ವೈರಸ್‌ಗೆ ತುತ್ತಾಗಿದ್ದ ವೃದ್ಧರೊಬ್ಬರು ಶುಕ್ರವಾರ ತಮ್ಮ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ 74 ವರ್ಷದ ವ್ಯಕ್ತಿಯೊಬ್ಬರಲ್ಲಿ ಝಿಕಾ ವೈರಸ್ ಪತ್ತೆಯಾಗಿತ್ತು.ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂ. 21ರಂದು ಝಿಕಾ ಸೋಂಕು ಅವರಲ್ಲಿ ಪತ್ತೆಯಾಗಿತ್ತು. ಬಳಿಕ ರಾಷ್ಟ್ರೀಯ ರೋಗ ಸೂಕ್ಷ್ಮಾಣುಗಳ ವೈಜ್ಞಾನಿಕ ಅಧ್ಯಯನ ಸಂಸ್ಥೆಗೆ ರಕ್ತದ ಮಾದರಿ ಕಳಿಸಿದ್ದು ಅಲ್ಲಿಯೂ ಝಿಕಾ ದೃಢಪಟ್ಟಿತ್ತು. ಅವರಿಗೆ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು ಗುರುವಾರ ಅವರನ್ನ ಕುಟುಂಬಸ್ಥರು ಮನೆಗೆ ಕರೆದೊಯ್ದಿದ್ದರು.