ಶಿರಸಿ: ಶಿಶು ಅಭಿವೃದ್ಧಿ ಇಲಾಖೆ ಆವರಣದಲ್ಲಿ ಶಾಸಕ ಹೆಬ್ಬಾರರಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ
ಶಿರಸಿ : ಶಾಸಕ ಶಿವರಾಮ ಹೆಬ್ಬಾರ್ ಮಂಗಳವಾರ ಶಿರಸಿಯಲ್ಲಿ ಬನವಾಸಿ ಹೋಬಳಿ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ತಾಲೂಕಾ ಪಂಚಾಯತ ಅನುದಾನದ ಅಡಿಯಲ್ಲಿ ವಿಕಲಚೇತನರಿಗೆ ತ್ರಿ ಚಕ್ರ ವಾಹನವನ್ನು ವಿತರಿಸಿದರು. ಶಿಶು ಅಭಿವೃದ್ಧಿ ಇಲಾಖೆ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಇಬ್ಬರಿಗೆ ದ್ವಿಚಕ್ರ ವಾಹನ ವಿತರಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.