ಶಿವಮೊಗ್ಗ: ಡೆಂಗ್ಯೂ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲ ಕೂಡಲೇ ಸಚಿವರು ರಾಜೀನಾಮೆ ನೀಡಿ ನಗರದಲ್ಲಿ ಬಿಜೆಪಿ ಪ್ರಕೋಷ್ಟಗಳ ಸಂಯೋಜಕ ಎಸ್ ದತ್ತಾತ್ರಿ
ಡಿಂಗ್ಯೂ ನಿಯಂತ್ರಿಸುವಲ್ಲಿ ವಿಫಲರಾದ ರಾಜ್ಯ ಸರ್ಕಾರದ ಆರೋಗ್ಯ ಸಚಿವಾದಿನೇಶ್ ಗುಂಡೂರಾವ್ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಪೌರಾಡಳಿತ ಸಚಿವ ರಹೀಂ ಖಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಕೋಶಗಳ ಸಂಯೋಜಕ ದತ್ತಾತ್ರಿ ಅವರು ಆಗ್ರಹಿಸಿದ್ದಾರೆ. ಶನಿವಾರ ಶಿವಮೊಗ್ಗ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಡೆಂಗ್ಯೂ ಮಹಾಮಾರಿ ರಾಜ್ಯದಲ್ಲಿ ಕಾಡುತ್ತಿದೆ ಆದರೆ ರಾಜ್ಯ ಸರ್ಕಾರ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಕೂಡಲೇ ಸಂಬಂಧಪಟ್ಟ ಇಲಾಖೆಯ ಸಚಿವರು ರಾಜೀನಾಮೆ ನೀಡಲೇಬೇಕು ಎಂದು ಒತ್ತಾಯಿಸಿದರು