ಅಂಕೋಲಾ ತಾಲೂಕಿನ ಅವರ್ಸಾದಲ್ಲಿ ಕಾರವಾರದ ಸುಪ್ರಸಿದ್ಧ ಪಿಕಳೆ ನರ್ಸಿಂಗ್ ಹೋಂನಲ್ಲಿ ದೀರ್ಘಕಾಲದಿಂದ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ರಾಜೀವ ಪಿಕಳೆ ಅವರು ತಮ್ಮ ನಿವಾಸದಲ್ಲಿ ಡಬಲ್ ಬ್ಯಾರಲ್ ಗನ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶುಕ್ರವಾರ ಮಧ್ಯಾಹ್ನ 12.30 ರ ಸುಮಾರು ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಪೊಲೀಸರು ತೆರಳಿ ತನಿಖೆ ಕೈಗೊಂಡಿದ್ದಾರೆ.