ರಾಯಚೂರು: ಹಿಂದೂ ಮಹಾಗಣಪತಿ ವಿಸರ್ಜನೆ ಅಂಗವಾಗಿ ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ನಗರದಲ್ಲಿ ಎಸ್ಪಿ ಪುಟ್ಟಮಾದಯ್ಯ ಹೇಳಿಕೆ
ರಾಯಚೂರು ನಗರದಲ್ಲಿ ಮಂಗಳವಾರ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನೆಯ ಅಂಗವಾಗಿ ಸಾವಿರಕ್ಕೂ ಅಧಿಕ ಪೊಲೀಸರನ್ನು ಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಪುಟ್ಟಮಾದಯ್ಯ ಅವರು ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ ಈ ಕುರಿತು ತಮ್ಮ ಕಚೇರಿಯಲ್ಲಿ ಹೇಳಿಕೆ ನೀಡಿ, ಗಣೇಶ ವಿಸರ್ಜನೆ ವೇಳೆಯಲ್ಲಿ ಯಾವುದೇ ಆಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಗಾಗಿ ಪೊಲೀಸ್ ಬಂದೋಬಸ್ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಸೂಚನೆಯನ್ನು ನೀಡಿದರು.