ಗ್ಯಾಸ್ ಸೋರಿಕೆಯಿಂದ ಎಗ್ ರೈಸ್ ಅಂಗಡಿಯಲ್ಲಿ ಭೀಕರ ಅಗ್ನಿ ದುರಂತ; ಅಂಗಡಿ ಸಂಪೂರ್ಣ ಸುಟ್ಟು ಕರಕಲು!
ದಾವಣಗೆರೆ: ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಗ್ಯಾಸ್ ಸೋರಿಕೆಯಿಂದ ಎಗ್ ರೈಸ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ.
ಚಂದ್ರಣ್ಣ ಎಂಬುವವರಿಗೆ ಸೇರಿದ ಎಗ್ ರೈಸ್ ಅಂಗಡಿಯಲ್ಲಿ ಎಗ್ ರೈಸ್ ತಯಾರಿಸುವ ವೇಳೆ ಗ್ಯಾಸ್ ಸೋರಿಕೆಯಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಅಂಗಡಿಯಾದ್ಯಂತ ವ್ಯಾಪಿಸಿದ್ದು, ಅಂಗಡಿ ಸುಟ್ಟು ಕರಕಲಾಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚನ್ನಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Yadgir, Yadgir | Nov 21, 2026