ಹಿರಿಯೂರು:ರಾಮಜೋಗಿಹಳ್ಳಿ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಸಚಿವ ಡಿ ಸುಧಾಕರ್ ಶಂಕುಸ್ಥಾಪನೆ ನೇರವೇರಿಸಿದರು. ವೇಳೆ ಮಾತನಾಡಿದ ಅವರು ಪರಿಶಿಷ್ಟರ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ರಸ್ತೆ ನೀರು ಚರಂಡಿ ಮತ್ತು ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಈ ಕಾಮಗಾರಿಯಿಂದ ಕಾಲೋನಿಯ ನಿವಾಸಿಗಳ ಸಂಚಾರಕ್ಕೆ ಅನುಕೂಲವಾಗಲಿದೆ ಎಂದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.