ಸಂವಿಧಾನ ಸಮರ್ಪಣಾ ದಿನದ ಪ್ರಯುಕ್ತ ನವಂಬರ್ 18 ರಂದು ವಿವಿಧ ಸಮುದಾಯಗಳ ಒಕ್ಕೂಟದಿಂದ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಮಹಿಳಾ ಮುಖಂಡರಾದ ವಿಜಯರಾಣಿ ಅವರು ಹೇಳಿದರು. ಅವರಿಂದು ನಗರದ ಸುದ್ದಿಗಾರರೊಂದಿಗೆ ಮಾತನಾಡಿ, ನವಂಬರ್ 26ರಂದು ದೇಶದ ಸಂವಿಧಾನ ಸಮರ್ಪಿಸಿಕೊಂಡ ದಿನ, ಸಾರ್ವಜನಿಕರಲ್ಲಿ ಸಂವಿಧಾನ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸಂವಿಧಾನ ಸಮರ್ಪಣಾ ದಿನಾಚರಣೆ ಪ್ರಯುಕ್ತ ಈ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.