ಅಂಕೋಲ: ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಖಂಡಿಸಿ ಹೊನ್ನಳಿ ಸೇತುವೆ ಬಳಿ ಪ್ರತಿಭಟನೆ
ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರ ಅವ್ಯವಸ್ಥೆ ಹಾಗೂ ಅವೈಜ್ಞಾನಿಕ ಕಾಮಗಾರಿ ವಿರುದ್ದ ಜಿಲ್ಲಾ ಲಾರಿ ಮಾಲೀಕರ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಯ ನೇತೃತ್ವದಲ್ಲಿ ಶುಕ್ರವಾರ ಸಂಜೆ 3.30ರವರೆಗೆ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಅಣಕು ಪ್ರದರ್ಶನದ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು. ರಾಷ್ಟ್ರೀಯ ಹೆದ್ದಾರಿಯನ್ನು ಸರಿಪಡಿಸುವಂತೆ ಒತ್ತಾಯ ಮಾಡಲಾಯಿತು.