ಲಿಂಗಸೂರು: ಜಿಲ್ಲೆಯಲ್ಲಿ ಹತ್ತಿ ಖರೀದಿ ಪ್ರಕ್ರಿಯೆ ಆರಂಭ ಸದುಪಯೋಗಕ್ಕೆ ಸಲಹೆ
2025-26ನೇ ಸಾಲಿನಲ್ಲಿ, ರಾಜ್ಯದ ಹತ್ತಿ ಬೆಳೆಗಾರರಿಂದ ಭಾರತೀಯ ಹತ್ತಿ ನಿಗಮ ನಿಯಮಿತದಿಂದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹತ್ತಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ತಿಳಿಸಿದ್ದಾರೆ. ಪ್ರತಿ ಕ್ವಿಂಟಲ್‌ಗೆ 7,710 ರೂ ಮತ್ತು ಉದ್ದನೆಯ ಎಳೆಗೆ ಪ್ರತಿ ಕ್ವಿಂಟಲ್ ಗೆ 8,110 ರೂ ನಿಗದಿಪಡಿಸಲಾಗಿದ್ದು, ನೋಂದಣಿ ಪ್ರಾರಂಭವಾಗಿದ್ದು, ಯೋಜನೆಯ ಪ್ರಯೋಜನೆ ಪಡೆಯಲು ಜಿಲ್ಲೆಯ ಎಲ್ಲಾ ಹತ್ತಿ ಬೆಳೆಗಾರರು ಕೊರಲಾಗಿದೆ.