ಶನಿವಾರ ಮಧ್ಯಾಹ್ನ 12.30ಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಂಕೋಲಾದ ಪಿ.ಎಂ. ಹೈಸ್ಕೂಲ್ನಲ್ಲಿ ನಡೆದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭ್ರೂಣ ಹತ್ಯೆ, ಮಾದಕ ವಸ್ತುಗಳ ಬಳಕೆ ಮತ್ತು ಮಕ್ಕಳ ಸುರಕ್ಷತೆಯ ಬಗ್ಗೆ ಅಧಿಕಾರಿಗಳಿಗೆ ನೇರ ಪ್ರಶ್ನೆಗಳನ್ನು ಕೇಳುವ ಮೂಲಕ ಗಮನ ಸೆಳೆದರು.