ಲಿಂಗಸುಗೂರು ತಾಲೂಕಿನ ಮಟ್ಟೂರು ತಾಂಡದಲ್ಲಿ ಪೊಲೀಸ್ ಪೇದೆ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ 5 ಗಂಟೆಗೆ ಪ್ರತಿಕ್ರಿಯೆ ನೀಡಿದ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಅವರು, ಮುದುಗಲ್ ಪೊಲೀಸ್ ಠಾಣೆಯ ಎಎಸ್ಐ ವೆಂಕಟೇಶ್ ನಾಯಕ ಅವರು ವಿಚಾರಣೆ ನಿಮಿತ್ಯ ಮನೆಗೆ ತೆರಳಿದ ಸಂದರ್ಭದಲ್ಲಿ ಪತಿ, ಪತ್ನಿ ಇಬ್ಬರು ಹಲ್ಲೆ ಮಾಡಿದ್ದಾರೆ. ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.