ದೇವನಹಳ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ "ಅಕ್ಕಪಡೆ" ಯೋಜನೆ ಅನುಷ್ಠಾನಗೊಳಿಸಲು ಖಾಲಿ ಇರುವ 5 ಹುದ್ದೆಗಳಿಗೆ ಅರ್ಹ ಮಹಿಳಾ ಎನ್.ಸಿ.ಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 13 ರೊಳಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 206, 2 ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ಇಲ್ಲಿ ಅರ್ಜಿ ಪಡೆದು ಸಲ್ಲಿಸುವುದು.