ಕಲಬುರಗಿ: ಕಲಬುರ್ಗಿ: ನೀರಿಗಾಗಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರ ಪ್ರತಿಭಟನೆ
ಜೇವರ್ಗಿ ತಾಲೂಕಿನ ಚಿಗರಳ್ಳಿ ಕ್ರಾಸ್ ಬಳಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಕ್ಯಾನಲ್ ನೀರು ನಿಲ್ಲಿಸಿದ್ದರಿಂದ ಬೆಳೆಗಳು ಒಣಗುತ್ತಿದ್ದು, ಡಿಸೆಂಬರ್ 31 ರವರೆಗೆ ನೀರು ಬಿಡುವಂತೆ ರೈತರು ಆಗ್ರಹಿಸಿದ್ದಾರೆ. ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರಸ್ತೆಯಲ್ಲೇ ಅಡುಗೆ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.