ಬೆಂಗಳೂರು ಉತ್ತರ: ಬೆಲೆ ಏರಿಕೆ ಮತ್ತು ತೆರಿಗೆ ಹೊರೆ ವಿರುದ್ಧ ಫ್ರೀಡಂ ಪಾರ್ಕ್ನಲ್ಲಿ ಜೆಡಿಎಸ್ ಪ್ರತಿಭಟನೆ
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಜೆಡಿಎಸ್ ಹಾಗೂ ಬಿಜೆಪಿ ಶುಕ್ರವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.ನಗರದ ಫ್ರೀಡಂ ಪಾರ್ಕ್ ನಲ್ಲಿ, ಬಿಜೆಪಿಯ ನಾಯಕರು ಸೇರಿ ನೂರಾರು ಮಂದಿ ಕಾಂಗ್ರೆಸ್ ಸರ್ಕಾರದ ನಡೆಯನ್ನು ಟೀಕಿಸಿದರು. ಗ್ರೇಟರ್ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ನಗರಗಳಲ್ಲಿ ನಾಗರಿಕರ ಆಸ್ತಿಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ ಎಂದು ಹರಿಹಾಯ್ದರು. ಹಾಲು, ಮೊಸರು, ನಂದಿನಿ ತುಪ್ಪ ಸೇರಿದಂತೆ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಮೂಲಕ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಜೆಡಿಎಸ್ ಮುಖಂಡರು ಪ್ರತಿಭಟನೆ ಮಾಡಿದರು.