ಜೋಯಿಡಾ : ಅರಣ್ಯವಾಸಿಗಳ ಸಮಸ್ಯೆಗಳ ಕುರಿತಂತೆ ಚರ್ಚಿಸಲು ನಾಳೆ ಜ.09ರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ದಾಂಡೇಲಿ ನಗರದ ಹಾರ್ನ್ ಬಿಲ್ ಸಭಾಭವನದಲ್ಲಿ ಕೆನರಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಜೋಯಿಡಾ ತಾಲೂಕಿನ ಅರಣ್ಯ ವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಅರಣ್ಯವಾಸಿಗಳ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆಯಬೇಕೆಂದು ಜಿಲ್ಲಾ ಕುಣಬಿ ಸಮಾಜದ ಅಧ್ಯಕ್ಷ ಸುಭಾಷ ಗಾವಡಾ ಅವರು ಇಂದು ಗುರುವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಜೋಯಿಡಾದಲ್ಲಿ ಮಾಧ್ಯಮದ ಮೂಲಕ ಮನವಿಯನ್ನು ಮಾಡಿದ್ದಾರೆ.