ಚಿತ್ರದುರ್ಗ: ಚಿತ್ರದುರ್ಗದಲ್ಲಿ ಅಗ್ನಿವೀರ ನೇಮಕಾತಿ ರ್ಯಾಲಿ: ಅಕ್ಟೋಬರ್ 31 ರಿಂದ ಆರಂಭ
ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಅಕ್ಟೋಬರ್ 31 ರಿಂದ ನವೆಂಬರ್ 3 ರವರೆಗೆ ಅಗ್ನಿವೀರ ನೇಮಕಾತಿ ರ್ಯಾಲಿ ನಡೆಯಲಿದೆ. ಒಟ್ಟು 957 ಅಭ್ಯರ್ಥಿಗಳು ಪಾಲ್ಗೊಳ್ಳಲಿದ್ದು, ಅಗತ್ಯ ದಾಖಲೆಗಳೊಂದಿಗೆ ಹಾಜರಾಗಲು ಸೂಚಿಸಲಾಗಿದೆ. ದಲ್ಲಾಳಿಗಳ ಬಗ್ಗೆ ಎಚ್ಚರವಿರಲಿ ಎಂದು ಜಿಲ್ಲಾಡಳಿತ ತಿಳಿಸಿದೆ.