ದಾಂಡೇಲಿ : ಡಿ.13 ರಿಂದ 15 ರವರೆಗೆ ನಗರದ ಹಳೆ ನಗರಸಭೆಯ ಮೈದಾನದಲ್ಲಿ ಉತ್ತರ ಕನ್ನಡ ಜಿಲ್ಲೆಯ 25ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈ ನಿಟ್ಟಿನಲ್ಲಿ ನಗರದ ಅಂಬೇವಾಡಿಯಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ದಾಂಡೇಲಿಯ ತಹಶೀಲ್ದಾರ್ ಶೈಲೇಶ ಪರಮಾನಂದ ಮತ್ತು ಹಳಿಯಾಳ ತಹಶೀಲ್ದಾರ್ ಫಿರೋಜ್ ಸೋಮನಕಟ್ಟಿ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆಯು ಬುಧವಾರ ನಡೆಯಿತು. ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಶಾಸಕರಾದ ಆರ್.ವಿ.ದೇಶಪಾಂಡೆ ಅವರನ್ನು ಈಗಾಗಲೇ ಆಯ್ಕೆ ಮಾಡಲಾಗಿದ್ದು, ಸಮ್ಮೇಳನದ ಕಾರ್ಯಾಧ್ಯಕ್ಷರಾಗಿ ದಾಂಡೇಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ, ಗೌರವ ಉಪಾಧ್ಯಕ್ಷರಾಗಿ ಹಳಿಯಾಳ ತಹಶೀಲ್ದಾರ್ ಫಿರೋಜ್ ಸೋಮನಕಟ್ಟಿ ಮತ್ತು ಇನ್ನಿತರ ಅಧಿಕಾರಿಗಳನ್ನು ನೇಮಿಸಲಾಯಿತು.