ಈದ್ ಮಿಲಾದ್ ಹಿನ್ನೆಲೆ: ಪುಟಪಾಕ್ ಗ್ರಾಮದಲ್ಲಿ ಶಾಂತಿ ಸಭೆ
ಗುರುಮಠಕಲ್: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪುಟಪಾಕ್ ಗ್ರಾಮದಲ್ಲಿ ಇಂದು ಶಾಂತಿ ಸಭೆ ಹಮ್ಮಿಕೊಳ್ಳಲಾಯಿತು.
ಸಭೆಯಲ್ಲಿ ಹಬ್ಬವನ್ನು ಶಾಂತಿಯುತವಾಗಿ, ಸೌಹಾರ್ದಯುತವಾಗಿ ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಆಚರಿಸುವಂತೆ ಪೊಲೀಸ್ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಸಾರ್ವಜನಿಕರಿಗೆ ಮನವಿ ಮಾಡಿದರು.
ಗುರುಮಠಕಲ್ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ದೌಲತ್ ಎನ್. ಕುರಿ ಮಾತನಾಡಿ, ಈದ್ ಮಿಲಾದ್ ಹಬ್ಬವನ್ನು ಎಲ್ಲರೂ ಪರಸ್ಪರ ಸಹಕಾರ, ಸಹಬಾಳ್ವೆ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಪೊಲೀಸ್ ಸಿಬ್ಬಂದಿ, ಗ್ರಾಮಸ್ಥರು, ವಿವಿಧ ಸಮುದಾಯಗಳ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.
#EidMilad #EidMilad2026 #PeaceMeeting #PutpakVillage #Gurumathkal #Yadgir #YadgirNews #PeaceAndHarmony #CommunalHarmony #Police #KarnatakaNews #KannadaNews #ಗುರುಮಠಕಲ್ #ಪುಟಪಾಕ್ #ಈದ್ಮಿಲಾದ್ #ಶಾಂತಿಸಭೆ #ಸೌಹಾರ್ದತೆ #ಯಾದಗಿರಿನ್ಯೂಸ್
Yadgir, Yadgir | Aug 23, 2026