ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಡಿಂಘೀ ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗ್ರತಾ ಕ್ರಮ: ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ
ಜಿಲ್ಲೆಯಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಡೆಂಘಿ ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರವೀಂದ್ರ ತಿಳಿಸಿದರು ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ 5 ಗಂಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿಸಮುದಾಯದೊಂದಿಗೆ ಸೇರಿ ಡೆಂಘಿ ಜ್ವರವನ್ನು ನಿಯಂತ್ರಿಸೋಣ ಎಂಬ ಘೋಷ ವಾಕ್ಯದೊಂದಿಗೆ ಜಿಲ್ಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಪ್ರತಿಯೊಬ್ಬರು ಡೆಂಗಿ ಬಾರದಂತೆ ನಿಯಂತ್ರಣ ಮಾಡಲು ಆರೋಗ್ಯ ಇಲಾಖೆ ನೀಡುವ ಸಲಹೆ ಸೂಚನೆ ಪಾಲಿಸಲು ಮನವಿ ಮಾಡಿದರು.