ಬೀದಿನಾಯಿ ನಿಯಂತ್ರಣಕ್ಕೆ ಜಿಲ್ಲಾಪಂಚಾಯತ್ ಕ್ರಮ ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಡಾ|| ಪ್ರವೀಣ್ ಪಿ.ಬಾಗೇವಾಡಿ ನೇತೃತ್ವದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಬೀದಿನಾಯಿ ನಿಯಂತ್ರಣಕ್ಕೆ ಕ್ರಮ ವಹಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಬೀದಿನಾಯಿಗಳ ಉಪಟಳದಿಂದ ವಯ್ಸಾದವರು, ಮಕ್ಕಳು, ಹಾಗೂ ಮಹಿಳೆಯರು ತೊಂದರೆಗೊಳಗಾಗುತ್ತಿದ್ದಾರೆ. ಗ್ರಾಮ ಪಂಚಾಯುತಿಗಳ ಮೂಲಕ ಬೀದಿನಾಯಿಗಳ ನಿಯಂತ್ರಣಕ್ಕೆ ಜಿಲ್ಲಾ ಪಂಚಾಯತ್ ಮುಂದಾಗಿದೆ. ಜಿಲ್ಲೆಯ ೧೫೪ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಅಂದಾಜು ೩೧ ಸಾವಿರ ಬೀದಿನಾಯಿಗಳಿವೆ ಎಂದು ಅಂದಾಜಿಸಲಾಗಿದೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಾಗಿ ಬೀದಿನಾ