ಯುವಕರು ಉತ್ತಮ ಫಲಿತಾಂಶದ ಜೊತೆಗೆ ಅತ್ಯುತ್ತಮ ಸಂಸ್ಕಾರವಂತರು ಆಗಬೇಕು. ಈ ನಿಟ್ಟಿನಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಮಾತ್ರ ಅಲ್ಲದೆ ಪಾಲಕರು ತಮ್ಮ ಮೇಲಿರುವ ಜವಾಬ್ದಾರಿಯನ್ನ ನಿಷ್ಠೆಯಿಂದ ನಿಭಾಯಿಸಬೇಕು ಎಂದು ಡಿಡಿಪಿಯು ಚಂದ್ರಕಾಂತ ಶಹಾಬಾದಕರ್ ಅವರು ಸಲಹೆ ನೀಡಿದರು. ನಗರದ ಶರಣಬಸವೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಮಧ್ಯಾಹ್ನ 1:30ಕ್ಕೆ ಹಮ್ಮಿಕೊಂಡ ಯುವ ದಿನಾಚರಣೆ ಮತ್ತು ಫಲಿತಾಂಶ ಸುಧಾರಣೆ ಕುರಿತ ಕಾರ್ಯಗಾರದಲ್ಲಿ ಮಾತನಾಡಿದರು.