ಲೋಕಸಭಾ ಚುನಾವಣೆ ಪ್ರಯುಕ್ತ ಪ್ರಚಾರಕ್ಕಾಗಿ ಹೆಚ್.ಡಿ. ಕೋಟೆ ಪಟ್ಟಣಕ್ಕೆ ಏಪ್ರಿಲ್ 12ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿರುವ ಹಿನ್ನೆಲೆ ಕಾರ್ಯಕ್ರಮ ನಡೆಯುವ ಸ್ಥಳವನ್ನು ಶಾಸಕ ಅನಿಲ್ ಚಿಕ್ಕಮಾದು ಗುರುವಾರ ಸಂಜೆ ಪರಿಶೀಲನೆ ನಡೆಸಿದರು. ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪೊಲೀಸ್ ಸಿಬ್ಬಂದಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಮೈಮುಲ್ ನಿರ್ದೇಶಕ ಈರೇಗೌಡ, ಪುರಸಭಾ ಸದಸ್ಯ ಎಚ್.ಸಿ. ನರಸಿಂಹಮೂರ್ತಿ, ಮಧು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಏಜಾದ್ ಪಾಷಾ, ಮುಖಂಡರಾದ ಮರಿದೇವಯ್ಯ ಇದ್ದರು.