ಹೊನ್ನಾವರ: ಇಂಡಗುಂಜಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು-ಬೈಕ್ ನಡುವೆ ಅಪಘಾತ ಬೈಕ್ ಸವಾರ ಗಂಭೀರ
ಹೊನ್ನಾವರ ತಾಲೂಕಿನ ಇಡಗುಂಜಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಬೈಕ್ ಸವಾರನೊರ್ವನಿಗೆ ಹೊನ್ನಾವರ ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಘಟನೆ ರವಿವಾರ ಸಂಜೆ 4.30ರ ಸುಮಾರ ಸಂಭವಿಸಿದೆ. ಈ ಅಪಘಾತದಿಂದ ಬೈಕ್ ಸವಾರ ವಸಂತ ಗೌಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಮಾವಿನಕಟ್ಟಾದಿಂದ ಇಡಗುಂಜಿ ಕ್ರಾಸ್ ಮೂಲಕ ಮನೆಗೆ ವಾಪಸ್ಸಾಗುತ್ತಿದ್ದಾಗಿ ಅಪಘಾತ ಸಂಭವಿಸಿದೆ. ಗಾಯಾಳುವಿಗೆ ಹೊನ್ನಾವರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ