ಅಫಜಲ್ಪುರ: ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಳ ಹಿನ್ನಲೆ: ಉಜ್ಜನಿ ಡ್ಯಾಂನಿಂದ ಸೊನ್ನ ಬ್ಯಾರೇಜ್ಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ
ಕಲಬುರಗಿ : ನೆರೆಯ ಮಹಾರಾಷ್ಟ್ರದಲ್ಲಿ ವ್ಯಾಪಕವಾಗಿ ಮಳೆ ಆಗುತ್ತಿರೋ ಪರಿಣಾಮ, ಉಜ್ಜನಿ ಜಲಾಶಯದಿಂದ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್ಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.. ಈ ಬಗ್ಗೆ ಸೆ15 ರಂದು ಬೆಳಗ್ಗೆ 9.30 ಕ್ಕೆ ಸೊನ್ನ ಡ್ಯಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.. ಉಜ್ಜನಿ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಹಿನ್ನಲೆಯಲ್ಲಿ, ಅಫಜಲಪುರ ಮತ್ತು ಜೇವರ್ಗಿ ತಾಲೂಕಿನ ಅನೇಕ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಆತಂಕ ಎದುರಾಗಿದ್ದು, ಎಚ್ಚರಿಕೆಯಿಂದ ಇರಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.