ಶಿರಸಿ: ಗ್ರಾಮೀಣ ಠಾಣೆ ಪೊಲೀಸರಿಂದ ನ್ಯಾಯಾಲಯಕ್ಕೆ ಹಾಜಾರಾಗದೇ 30 ವರ್ಷಗಳಿಂದ ತಲೆರೆಸಿಕೊಂಡ ಆರೋಪಿಯ ಬಂಧನ
ಶಿರಸಿ : ಸರ್ಕಾರಿ ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿ ಮೋಸ ಮಾಡಿದ ಆರೋಪದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜಾರಾಗದೇ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬೈಂದೂರಿನ ಮಯ್ಯಾಡಿಯ ಬಿ. ಕೆ ರಾಮಚಂದ್ರರಾವ್ ಬಂಧಿತ ಆರೋಪಿ. ಈತನ ವಿರುದ್ಧ ಸರ್ಕಾರಿ ಕೆಲಸ ಕೊಡಿಸುವುದಾಗಿ 200 ರೂಪಾಯಿಗಳನ್ನು ಪಡೆದು, ಕೊಟ್ಟ ಮಾತಿನಂತೆ ಕೆಲಸ ಕೊಡಿಸದೆ ಮೋಸ ಮಾಡಿದ ಪ್ರಕರಣ ದಾಖಲಾಗಿದ್ದು, ಇದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ 30 ವರ್ಷದಿಂದ ತಲೆಮರೆಸಿಕೊಂಡಿದ್ದರಿಂದ ಪತ್ತೆ ಮಾಡಲಾಗಿದೆ.