ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು: ಕಾಂಗ್ರೆಸ್ ಮುಖಂಡ ಜನಪಹಳ್ಳಿ ನವೀನ್, ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಮಾಜಿ ಉಪಾಧ್ಯಕ್ಷ ಜನಪನಹಳ್ಳಿ ನವೀನ್ ಕುಮಾರ್ ವಾಗ್ದಾಳಿ ನಡೆಸಿದರು. ತಾಲ್ಲೂಕಿನ ಜನಪನಹಳ್ಳಿಯ ಕಾಂಗ್ರೆಸ್ ಮುಖಂಡರೊಂದಿಗೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ದಡ್ಡರಲ್ಲ ತಾವು ಹೇಳಿದ ಮಾತನ್ನೂ ಕೇಳಿದ್ದಾರೆ. ಕೆ.ಆರ್.ರಮೇಶ್ ಕುಮಾರ್ ಏಕೆ ಈ ಯೋಜನೆ ಜಾರಿ ಮಾಡಿಸಿದರು ಎಂಬುದನ್ನೂ ನೋಡಿದ್ದಾರೆ