ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕೆನರಾ ಬ್ಯಾಂಕ್ ಹಿರಿಯ ಮ್ಯಾನೇಜರ್ ಎನ್. ರಘು ವಿರುದ್ಧ 41 ಗ್ರಾಹಕರಿಗೆ 3.11 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಸೋಮವಾರ ಕೇಳಿಬಂದಿದೆ. ಸುಮಾರು 41 ಖಾತೆಗಳಿಂದ ನಕಲಿ ಗೋಲ್ಡ್ ಲೋನ್ ಸೃಷ್ಟಿಸಿ ಈ ವಂಚನೆ ಎಸಗಲಾಗಿದೆ. ಈ ಸಂಬಂಧ ಮಲ್ಲೇಶ್ವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.