ಬೆಂಗಳೂರಿನಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದಾಗಿ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಾಟನ್ ಪೇಟೆ ಪೊಲೀಸ್ ರಸ್ತೆಯಲ್ಲಿ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಕಳೆದ ಆರು ತಿಂಗಳಿನಿಂದ ಈ ಕಾಮಗಾರಿ ನಡೆಯುತ್ತಿದ್ದು, ಜನರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಬಿಎ ಮತ್ತು ಜಲಮಂಡಳಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.